ಬೀಗರ ಊಟ ಸೇವಿಸಿದ ಮದುಮಕ್ಕಳು ಸೇರಿ 500ಕ್ಕೂ ಅಧಿಕ ಮಂದಿ ಅಸ್ವಸ್ಥ

ಕುಶಾಲನಗರ: ಬೀಗರ ಊಟ ಸೇವಿಸಿದ 500ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ಗುರುವಾರ ಸಂಜೆ ನಡೆದಿದೆ.

ಮದು ಮಕ್ಕಳು, ಪೋಷಕರು ಕೂಡ ಅನಾರೋಗ್ಯಕ್ಕೀಡಾಗಿದ್ದು ಪಿರಿಯಾಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೀಗರ ಊಟದಲ್ಲಿ ಊಟ ಸೇವಿಸಿದ 500ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಶುರುವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಖಾಸಗಿ ರೆಸಾರ್ಟ್ ನಲ್ಲಿ ಬೀಗರ ಊಟ ನಡೆದಿದ್ದು, ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಸಂಜೆ ವೇಳೆಗೆ ಆಹಾರ ಸೇವಿಸಿದ ಅನೇಕರಲ್ಲಿ ವಾಂತಿ ಭೇದಿ ಆಗಿದ್ದು, ವೃದ್ಧರು, ಮಹಿಳೆಯರು, ಮಕ್ಕಳು ಸೇರಿ ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ಕೂಡ ಬೀಗರ ಊಟದಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡ ಭಾಗವಹಿಸಿದ್ದರು. ಸಚಿವ ವೆಂಕಟೇಶ್ ಆರೋಗ್ಯವಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read