HomeAgricultureBIG NEWS: ನಿರಂತರ 7 ಗಂಟೆ ವಿದ್ಯುತ್: ರೈತರಿಗೆ ವರದಾನವಾದ “ಕುಸುಮ್” ಬಿ, ಸಿ ಯೋಜನೆಗೆ...

BIG NEWS: ನಿರಂತರ 7 ಗಂಟೆ ವಿದ್ಯುತ್: ರೈತರಿಗೆ ವರದಾನವಾದ “ಕುಸುಮ್” ಬಿ, ಸಿ ಯೋಜನೆಗೆ ಚಾಲನೆ

ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂದನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು.

ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ದೊರೆಯಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ರಾಜ್ಯಾದ್ಯಂತ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ಒಂದು ತಿಂಗಳಲ್ಲಿ 500 ರಿಂದ 600 ಮೆಗಾ ವ್ಯಾಟ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಅಗತ್ಯ ತಯಾರಿಗಳು ನಡೆದಿವೆ. ವಿದ್ಯುತ್ ಉಪಕೇಂದ್ರಗಳು ಇರುವ ಸ್ಥಳಗಳ ಹತ್ತಿರ ಒಂದು ಮೆಗಾ ವ್ಯಾಟ್ ಉತ್ಪಾದನೆಗೆ ಕನಿಷ್ಟ ಸುಮಾರು 4 ಎಕರೆ ಜಮೀನು ಅಗತ್ಯವಾಗಿ ಬೇಕಾಗುತ್ತದೆ. ವಿದ್ಯುತ್ ಉಪಕೇಂದ್ರದ ಸಾಮಥ್ರ್ಯಕ್ಕೆ ಅನುಗುಣವಾಗಿ ಸೋಲಾರ್ ಪಾರ್ಕ್‍ಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಿ ಅಲ್ಲಿಯೇ ಪೂರೈಕೆ ಮಾಡಿ ಕೊಡಲಾಗುವುದು ಎಂದು ತಿಳಿಸಿದ ಅವರು, ಈಗಾಗಲೇ 1200 ಮೆಗಾ ವ್ಯಾಟ್ ಹಂಚಿಕೆಯಾಗಿದ್ದು, ಬಾಕಿ ಇರುವುದಕ್ಕೂ ಟೆಂಡರ್  ಕರೆಯಲಾಗಿದೆ ಎಂದು ಹೇಳಿದರು.

ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಖಾಸಗಿಯವರು ಬಂಡವಾಳ ಹೂಡಿಕೆ ಮಾಡುತ್ತಾರೆ. ಸರ್ಕಾರದಿಂದ ಲಭ್ಯವಿರುವೆಡೆ ಸರ್ಕಾರಿ ಭೂಮಿ ನೀಡಲಾಗುವುದು, ಅಲ್ಲದೆ ಸೋಲಾರ್ ಘಟಕಗಳಲ್ಲಿ ಉತ್ಪಾದಿಸುವ ವಿದ್ಯುತ್ ಅನ್ನು ಸರ್ಕಾರವೇ ಗರಿಷ್ಟ 3.17 ರೂ. ನಂತೆ ಖರೀದಿ ಮಾಡಲಾಗುವುದು. ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಹಣವನ್ನು ಖಾಸಗಿ ಏಜೆನ್ಸಿಯವರು ಪ್ರತಿ ವರ್ಷ ಪಾವತಿಸಬೇಕು, ಈ ಹಣವನ್ನು ಜಿಲ್ಲಾಧಿಕಾರಿಗಳ ಬಳಿ ಡಿಪಾಸಿಟ್ ಮಾಡಲಾಗುವುದು. ಆಯಾ ಕ್ಷೇತ್ರದ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆ, ಅಂಗನವಾಡಿ, ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಬಹುದಾಗಿದೆ.  ಈ ಯೋಜನೆಯಿಂದ ರೈತರಿಗೆ ರಾತ್ರಿಯ ಜೊತೆಗೆ ಹಗಲಿನಲ್ಲಿಯೂ ಉತ್ತಮ ವಿದ್ಯುತ್ ದೊರೆಯಲಿದ್ದು, ನಿದ್ದೆಗೆಟ್ಟು ನೀರಿಗಾಗಿ ಪರಿತಪಿಸುವುದು ತಪ್ಪಲಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular