HomeJobsಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :   ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 01 ಮಹಿಳಾ ವೈದ್ಯರ ಹುದ್ದೆಯನ್ನು ತಾತ್ಕಾಲಿಕ/ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 19-09-2026 ರೊಳಗಾಗಿ ‘ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾಂದ್ರಿ, ಶಂಕರಘಟ್ಟ – 577451, ಶಿವಮೊಗ್ಗ ಜಿಲ್ಲೆ’ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

 ಅರ್ಜಿ ನಮೂನೆ, ಅರ್ಹತೆಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kuvempu.ac.in ಗೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಭದ್ರಾ ಮೇಲ್ದಂಡೆ ಯೋಜನೆ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಬಿಡುಗಡೆ – ಸಾರ್ವಜನಿಕರಿಗೆ ಮುನ್ನೆಚ್ಚರಿಕೆ

 ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಯೋಗಾತ್ಮಕವಾಗಿ ನೀರನ್ನು ಹರಿಸಲು ಸರ್ಕಾರ ಆದೇಶಿಸಿದೆ.ನೀರು ಬಿಡುಗಡೆ ದಿನಾಂಕ: ಸೆಪ್ಟೆಂಬರ್ 06 ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.

 ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಿಂದ ಆರಂಭವಾಗಿ 0.00 ಕಿ.ಮೀ ನಿಂದ 114.142 ಕಿ.ಮೀ ವರೆಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ, ಕಡೂರು ತಾಲೂಕುಗಳು,

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕುಗಳ ಮೂಲಕ ಗೋನೂರು ಕೆರೆಯವರೆಗೆ ನೀರು ತಲುಪಲಿದೆ.

 ಸಾರ್ವಜನಿಕರಿಗೆ ಸುರಕ್ಷತಾ ಸೂಚನೆಗಳು:

ಕಾಲುವೆ ಮತ್ತು ಹಳ್ಳಗಳ ದಂಡೆಯಲ್ಲಿ ಸಾರ್ವಜನಿಕರು ಸಂಚರಿಸುವುದು, ಈಜುವುದು ಹಾಗೂ ಜಾನುವಾರುಗಳನ್ನು ಕಾಲುವೆಗೆ ಇಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾಲುವೆ ಕಟ್ಟೆಗಳನ್ನು ಹಾನಿಗೊಳಿಸುವುದು ಹಾಗೂ ಅನಧಿಕೃತವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರು ಎತ್ತುವುದು ಕಾನೂನುಬಾಹಿರವಾಗಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.

 ಹುಲಿ-ಸಿಂಹಧಾಮದಲ್ಲಿ 17 ವರ್ಷದ ಹೆಣ್ಣುಹುಲಿ ದಶಮಿ ಸಾವು

 ಶಿವಮೊಗ್ಗತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ 17 ವರ್ಷದ ಹೆಣ್ಣು ಹುಲಿ ದಶಮಿ ಸೆ. 06 ರಂದು ಬೆಳಿಗ್ಗೆ 11.25 ಕ್ಕೆ ವಯೋಸಹಜವಾದ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಮೃಗಾಲಯದ ಪಶುವೈದರು ದೃಢಪಡಿಸಿದ್ದಾರೆ.

 ಈ ಬಗ್ಗೆ ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಪಶುವೈದ್ಯರ ತಂಡದಿಂದ ನಡೆಸಲಾಗುವುದು ಎಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗದಲ್ಲಿ ಸೆಪ್ಟೆಂಬರ್ 21 ರಂದು ಡಾಕ್ ಅದಾಲತ್‌

ಶಿವಮೊಗ್ಗ ಅಂಚೆ ವಿಭಾಗದ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿನಾಂಕ 21.09.2026 ರ ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಜೈಲು ರಸ್ತೆ, ಶಿವಮೊಗ್ಗ-577201 ಇಲ್ಲಿ ಆಯೋಜಿಸಲಾಗಿದೆ.

ಅಂಚೆ ಇಲಾಖೆಯ ಸೇವೆಗಳ ಕುರಿತು ಯಾವುದೇ ಕುಂದುಕೊರತೆಗಳು ಅಥವಾ ಸಲಹೆಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಸಂಪೂರ್ಣ ವಿವರಗಳೊಂದಿಗೆ ಮೇಲ್ಕಂಡ ವಿಳಾಸಕ್ಕೆ ದಿನಾಂಕ 18.09.2026 ರೊಳಗಾಗಿ ತಲುಪುವಂತೆ ಕಳುಹಿಸಿಕೊಡಬಹುದು. ಸ್ವೀಕರಿಸಲಾದ ಕುಂದುಕೊರತೆಗಳು ಹಾಗೂ ಸಲಹೆಗಳನ್ನು ಡಾಕ್ ಅದಾಲತ್‌ನಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ತಮ್ಮ ಸ್ವಂತ ವೆಚ್ಚದಲ್ಲಿ ಡಾಕ್ ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಹಾಗೂ ಸಲಹೆಗಳ ಕುರಿತು ಚರ್ಚಿಸಬಹುದಾಗಿದೆ ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ಎಮ್. ಕುಮಾರಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular