ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಜೀವದಹನ

ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಕುವೈತ್ ನ ಅಬ್ಬಾಸಿಯಾದ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಪತ್ನಿ ಲಿನಿ ಅಬ್ರಹಾಂ (35), ಮಕ್ಕಳಾದ ಐರಿನ್ (14) ಹಾಗೂ ಇಸಾಕ್ (9) ಮೃತ ದುರ್ದೈವಿಗಳು. ಕೇರಳದ ಕೊಚ್ಚಿಯಲ್ಲಿನ ನೆಡುಂಬಸ್ಸರಿ ಮೂಲದ ಮ್ಯಾಥ್ಯೂಸ್ ಹಾಗೂ ಕುಟುಂಬ ಕಳೆದ 15 ವರ್ಷಗಳಿಂದ ಕುವೈತ್ ನ ಅಬ್ಬಾಸಿಯಾದಲ್ಲಿ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳಾದ ಐರಿನ್ ಹಾಗೂ ಇಸಾಕ್ 9 ಹಾಗೂ 4ನೇ ತರಗತಿಯಲ್ಲಿ ಓದುತ್ತಿದ್ದರು.

ತಡರಾತ್ರಿ ಮನೆಯ ರೂಮಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ. ನಾಲ್ವರು ಸಜೀವದಹನವಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read