HomeKarnatakaಇಂದಿನಿಂದ ಸಾರ್ವಜನಿಕರಿಗೆ ಲಾಲ್ ಬಾಗ್ ನಲ್ಲಿ 'ಪ್ಲವರ್ ಶೋ' ವೀಕ್ಷಣೆಗೆ ಅವಕಾಶ

ಇಂದಿನಿಂದ ಸಾರ್ವಜನಿಕರಿಗೆ ಲಾಲ್ ಬಾಗ್ ನಲ್ಲಿ ‘ಪ್ಲವರ್ ಶೋ’ ವೀಕ್ಷಣೆಗೆ ಅವಕಾಶ

ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸಾರ್ವಜನಿಕರಿಗೆ ಪ್ಲವರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ನಿನ್ನೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದರು.

ಫ್ಲವರ್ ಶೋ ಜೊತೆಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವವರಿಗೆ ವೀಕ್ ಡೇಸ್ನಲ್ಲಿ ಹಿರಿಯರಿಗೆ 70 ರೂ ಹಾಗೂ ಮಕ್ಕಳಿಗೆ 30 ರೂ ನಿಗದಿ ಮಾಡಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ.

ತೋಟಗಾರಿಕೆ ಇಲಾಖೆ, ನಗರದ ವಿವಿಧ ಲಾಭರಹಿತ ಸಂಸ್ಥೆಗಳ ಸಹಯೋಗದೊಂದಿಗೆ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಶೇಷ ಅಂದರೆ ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ನೋಡುಗರ ಮನ ಸೂರೆಗೊಳಿಸಲಿದೆ.76 ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214 ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದ್ದು, ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಲಾಲ್ ಬಾಗ್ ನಲ್ಲಿರುವ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಯಿಗಳಿಗೆ ವ್ಯಾಕ್ಸಿನ್ ಮಾಡಿಸಲಾಗಿದೆ.ಫ್ಲವರ್ ಶೋನಲ್ಲಿ ಈ ಬಾರಿ ಪ್ರಮುಖವಾಗಿ ಸ್ವದೇಶಿ ಹೂಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 7 ಲಕ್ಷ ಹೂಗಳನ್ನು ಲಾಲ್ ಬಾಗ್ ನರ್ಸರಿಯಲ್ಲಿ ಬೆಳೆಸಲಾಗಿದೆ. ಇನ್ನು 8 ಲಕ್ಷದಷ್ಟು ಹೂಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ನಂದಿಗಿರಿಧಾಮ, ಕೆಮ್ಮಣ್ಣುಗುಂಡಿ ಗಿರಿಧಾಮ, ತಮಿಳುನಾಡು, ಆಂಧ್ರಪ್ರದೇಶ, ಊಟಿಯಿಂದ ತರಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular