ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಹತೆ, ಉದ್ಯಮಗಳಿಗೆ ಅಗತ್ಯವಾದ ಉನ್ನತೀಕರಿಸಿದ ಕೌಶಲ ತರಬೇತಿ ಒದಗಿಸಿ ಉದ್ಯೋಗಾವಶಕಾಶ ಕಲ್ಪಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕ್ರಮ ಕೈಗೊಂಡಿದ್ದಾರೆ.

ವಿಕಾಸ ಸೌಧದಲ್ಲಿ ಉನ್ನತೀಕರಿಸಿದ ಕೌಶಲ ತರಬೇತಿ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಪೂರ್ವ ಸಭೆ ಸೋಮವಾರ ನಡೆದಿದ್ದು, ಕೇಂದ್ರಗಳ ಪರಿಕಲ್ಪನೆ, ಪೂರ್ವ ತಯಾರಿ ಬಗ್ಗೆ ಸಚಿವರು ಸಮಾಲೋಚನೆ ನಡೆಸಿದ್ದಾರೆ.

ಖಾಸಗಿ ಕಂಪನಿಗಳು, ಉದ್ಯಮಿಗಳು, ಕಾರ್ಖಾನೆಗಳ ಸಹಭಾಗಿತ್ವದಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಕೇಂದ್ರಕ್ಕೆ ಅಗತ್ಯವಾದ ಜಾಗ ಸೇರಿ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಸೃಜಿಸಿ ಕೊಡಲಿದೆ. ಅಗತ್ಯವಿರುವ ಕೋರ್ಸ್ ಮತ್ತು ಪಠ್ಯಕ್ರಮಗಳನ್ನು ಸಿದ್ಧಪಡಿಸಿ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವುದು ಖಾಸಗಿ ಕಂಪನಿ, ಉದ್ಯಮ ಮತ್ತು ಕಾರ್ಖಾನೆಗಳ ಜವಾಬ್ದಾರಿ ಆಗಿರುತ್ತದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಲ್ಲಿ 50 ಲಕ್ಷ ಕಾರ್ಮಿಕರ ಹೆಸರು ನೋಂದಣಿಯಾಗಿದ್ದು, ಮೊದಲ ಹಂತದಲ್ಲಿ ಈ ಕಾರ್ಮಿಕರ ಮಕ್ಕಳು, ನಂತರ ಅಸಂಘಟಿತ ವಲಯದ 50 ಲಕ್ಷ ಕಾರ್ಮಿಕರ ಮಕ್ಕಳಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಕಂದಾಯ ವಿಭಾಗವಾರು ಉನ್ನತೀಕರಿಸಿದ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಪ್ರಾಯೋಗಿಕವಾಗಿ ಹುಬ್ಬಳ್ಳಿ -ಧಾರವಾಡದಲ್ಲಿ ಕೌಶಲ ತರಬೇತಿ ಕೇಂದ್ರ ತೆರೆಯಲಾಗುವುದು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read