ಲೇಹ್: ಲಡಾಕ್ ನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 4.1ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಇಂದು ಬೆಳಗಿನ ಜಾವ 3:54ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಲೇಹ್‌ನಲ್ಲಿ 150 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಭೂಕಂಪದಿಂದ ಯಾವುದೇ ಸಾವು-ನೋವು, ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ.
ಇದೊಂದು ಮಧ್ಯಮ ತೀವ್ರತೆಯ ಭೂಕಂಪವಾಗಿದೆ ಎಂದು ವರದಿಯಾಗಿದೆ. ಭೂಕಂಪದಿಂದಾಗಿ ಭೂಮಿ ಅಲುಗಾಡಿದ ಅನುಭವವಾಗಿದ್ದು, ನಿವಾಸಿಗಳು ಭಯಭೀತರಾಗಿ ಹೊರಗೆ ಓಡಿ ಬಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೆ ಸಹಜ ಸ್ಥಿತಿಗೆ ಮರಳಿದೆ.
ಇದೇವ್ ವೇಳೆ ಅಫ್ಘಾನಿಸ್ಥಾನದಲ್ಲೂ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರತಿಳಿಸಿದೆ.

