ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ | Video

ಮಹಿಳೆಯೊಬ್ಬಳು ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ ಮಾಡುತ್ತಿದ್ದ ವಿಡಿಯೋ ಒಂದು ನೆಟ್ಟಿಗರ ಕೋಪಕ್ಕೆ ಕಾರಣವಾಗಿದೆ. ದಿ ಪ್ರಿಯಾ ರಾಣಾ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಅದರಲ್ಲಿ ಅತ್ಯಾಚಾರದ ಸುಳ್ಳು ಆರೋಪ ಮಾಡಿ ಹಣ ವಸೂಲಿ ಎಂದು ಶೀರ್ಷಿಕೆ ನೀಡಲಾಗಿದೆ. ಅತ್ಯಾಚಾರದ ದೂರನ್ನು ಹಿಂತೆಗೆದುಕೊಳ್ಳಲು ಮಹಿಳೆ ಹಣಕ್ಕೆ ಬೇಡಿಕೆ ಇಟ್ಟಿರೋದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದು ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಮಹಿಳೆ ಸುಳ್ಳು ಅತ್ಯಾಚಾರ ಆರೋಪ ಹೊರಿಸಿ ನಂತ್ರ ದೂರು ವಾಪಸ್‌ ಪಡೆಯಲು ಹಣ ಕೇಳ್ತಾಳೆ. ಅನೇಕರಿಗೆ ಈ ಮಹಿಳೆ ಮೋಸ ಮಾಡಿದ್ದಾಳೆ ಎನ್ನಲಾಗಿದೆ.

ವೈರಲ್‌ ವಿಡಿಯೋ ವೀಕ್ಷಣೆ ಮಾಡಿದ ಜನರು, ಕಾನೂನನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಈಕೆಯನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಕಾನೂನು ವ್ಯವಸ್ಥೆಯ ಇಂತಹ ದುರುಪಯೋಗ ಪ್ರಾಮಾಣಿಕ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ದುರ್ಬಲಗೊಳಿಸುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಅನೇಕರು ಒತ್ತಾಯಿಸಿದ್ದಾರೆ.

https://twitter.com/priyarana3101/status/1814713180842606934?ref_src=twsrc%5Etfw%7Ctwcamp%5Etweetembed%7Ctwterm%5E1814713180842606934%7Ctwgr%5E1541236f3207ac35ea30076ecf4ef72c30f339d5%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fdnpindia-epaper-dh32aa52fd1e564d7ab912b538d71eaab2%2Fviralvideoempoweredwomanladylevelsfalserapechargesforextortionmoneycollectingvideoviralwatch-newsid-n623018211

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read