HomeKarnatakaBIG NEWS: ಮಹಿಳಾ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ; ಇಬ್ಬರಿಂದ ಕೊಲೆ ಶಂಕೆ

BIG NEWS: ಮಹಿಳಾ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ; ಇಬ್ಬರಿಂದ ಕೊಲೆ ಶಂಕೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಬ್ಬರು ದುಷ್ಕರ್ಮಿಗಳು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೊದಲು ಅಧಿಕಾರಿಯ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿದ್ದು, ಬಳಿಕ ಚಾಕುವಿನಿಂದ ಕತ್ತನ್ನು ಸೀಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆಯಾದ ಪ್ರತಿಮಾ ಮನೆಯಲ್ಲಿ ಅವರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಅಧಿಕಾರಿಗಳು ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ (45) ಅವರನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ ಬೆಂಗಳೂರಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular