HomeKarnatakaಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ಮಹಿಳಾ PSI ಮೇಲೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಹನುಮಂತಪುರದ ದರ್ಶನ್ ವಶಕ್ಕೆ ಪಡೆದ ಆರೋಪಿ. ತುಮಕೂರಿನ ನಾಗರಕಟ್ಟೆಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಡಿಜೆ ವಾಹನದ ಬಳಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ ಐಗೆ ಆರೋಪಿ ದರ್ಶನ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಮೆರವಣಿಗೆ ಎಂ.ಜಿ.ರಸ್ತೆಯ ಮಹದೇವ ಸ್ಟೇಷನರಿ ಅಂಗಡಿ ಬಳಿ ತಲುಪುತ್ತಿದ್ದ ವೇಳೆ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular