HomeKarnatakaBREAKING: ಆಟವಾಡುವಾಗ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವು

BREAKING: ಆಟವಾಡುವಾಗ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವು

ಹಾವೇರಿ: ಆಟವಾಡುತ್ತಿದ್ದಾಗ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಕೊಪ್ಪರಶಿಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿಖಿಲ್ ನಾಗೋಜಿ(11), ಧನುಷ್ ಚೋಳಪ್ಪನವರ(13) ಮೃತಪಟ್ಟವರು ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೊಪ್ಪರಶಿಕೊಪ್ಪ ಗ್ರಾಮದ ಬಳಿ ಕೆರೆಗೆ ಬಿದ್ದು ಬಾಲಕರು ಮೃತಪಟ್ಟಿದ್ದಾರೆ.

ಕೆರೆಯ ಬಳಿ ಆಟವಾಡುವಾಗ ಬಾಲಕರು ನೀರಿಗೆ ಬಿದ್ದಿದ್ದು, ಈಜು ಬಾರದೇ ನೀರಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular