ಕುಟುಂಬದ ಇಬ್ಬರು ಬಾಲಕರು ನೀರು ಪಾಲು: ಮಕ್ಕಳ ಸಾವಿನಿಂದ ಮುಗಿಲು ಮುಟ್ಟಿದ ಆಕ್ರಂದನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ.

ಸಹೋದರರ ಮಕ್ಕಳಾಗಿರುವ ಯಶವಂತ(10), ರೋಹಿತ್(6) ಮೃತಪಟ್ಟವರು. ಸಮೀಪದ ಕೆರೆ ಬಳಿ ಹೋಗಿದ್ದ ಬಾಲಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಶಶಿಧರ ಮತ್ತು ಪುಷ್ಪಾ ದಂಪತಿಯ ಪುತ್ರ ಯಶವಂತ 4ನೇ ತರಗತಿ ಓದುತ್ತಿದ್ದ. ಶಶಿಧರ ಅವರ ಸಹೋದರ ಹರೀಶ್ ಮತ್ತು ಸೌಮ್ಯ ದಂಪತಿಯ ಮಗ ರೋಹಿತ್ 1 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಇಬ್ಬರೂ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ನಾಲ್ಕು ತಿಂಗಳ ಹಿಂದೆ ರೋಹಿತ್ ತಮ್ಮ ಒಂದೂವರೆ ವರ್ಷದ ಭುವನ್ ಹೊಸದುರ್ಗ ತಾಲ್ಲೂಕಿನ ದೊಡ್ಡೇನಪಾಳ್ಯದಲ್ಲಿ ಶಾಲಾ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ. ಆದಾಗಿ ಕೆಲವೇ ದಿನಗಳ ಅಂತರದಲ್ಲಿ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದರಿಂದ ಕುಟುಂಬದವರ ಆಘಾತಕ್ಕೆ ಒಳಗಾಗಿದ್ದಾರೆ, ಮಕ್ಕಳ ಮೃತದೇಹ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read