HomeLatest Newsಲಕ್ಕುಂಡಿ ಉತ್ಖನನ ಪ್ರದೇಶ ನಿರ್ಬಂಧಿತ ವಲಯ ಎಂದು ಘೋಷಣೆ: ಫೋಟೋ, ವಿಡಿಯೋ ಚಿತ್ರೀಕರಣಕ್ಕೂ ನಿಷೇಧ

ಲಕ್ಕುಂಡಿ ಉತ್ಖನನ ಪ್ರದೇಶ ನಿರ್ಬಂಧಿತ ವಲಯ ಎಂದು ಘೋಷಣೆ: ಫೋಟೋ, ವಿಡಿಯೋ ಚಿತ್ರೀಕರಣಕ್ಕೂ ನಿಷೇಧ

ಗದಗ: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ವಿವಿಧ ಪುರಾತನ ವಸ್ತುಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾಡಳಿತ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭಿಸಿದೆ. ಜನವರಿ 16ರಿಂದ ಉತ್ಖನನ ಕಾರ್ಯಕ್ಕೆ ಅಧಿಕೃತವಾಗಿ ಜಿಲ್ಲಾಧಿಕಾರಿಗಳು ಚಾಲನೆ ನೀಡಿದ್ದಾರೆ.

ಉತ್ಖನನ ನಡೆಸುವ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಿಸಲಾಗಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಆರಂಭವಾಗಿದ್ದು, ಉತ್ಖನನ ನಡೆಯುವ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶ, ಫೋಟೋ, ವಿಡಿಯೋ ಚಿತ್ರೀಕರಣಗಳನ್ನು ನಿರ್ಬಂಧಿಸಲಾಗಿದೆ. ಐತಿಹಾಸಿಕ ನಿಧಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದ್ದಾರೆ.

ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರಿನಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಈ ಪ್ರದೇಶ ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಉತ್ಖನನ ಕಾರ್ಯ ಸಂಪೂರ್ಣವಾಗುವವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಕಗೊಂಡವರನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರು, ಪ್ರವಾಸಿಗರು, ಇತರ ವ್ಯಕ್ತಿಗಳು ಈ ಸ್ಥಳಕ್ಕೆ ಪ್ರವೇಶಿಸಲು, ಫೋಟೋಗ್ರಫಿ, ವಿಡಿಯೋಗ್ರಫಿ ತೆಗೆಯಲು ಅವಕಾಶವಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರಂಪರಿಕ ಪ್ರದೇಶ ಸಂರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular