HomeLatest NewsBREAKING NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

BREAKING NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಲಕ್ಷ್ಮಣ ಸವದಿ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ದರೂರ್ ಬಳಿ ನಡೆದಿದೆ.

ಅಪಘಾತದಲ್ಲಿ ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಸದ್ಯ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದು, ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular