HomeKarnatakaBREAKING NEWS: ಬಿಜೆಪಿಗೆ ಮರು ಸೇರ್ಪಡೆ ವಿಚಾರ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟ ಪ್ರತಿಕ್ರಿಯೆ

BREAKING NEWS: ಬಿಜೆಪಿಗೆ ಮರು ಸೇರ್ಪಡೆ ವಿಚಾರ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ಮರಳಿ ಕರೆತರುವ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಈ ಚರ್ಚೆ ಬಗ್ಗೆ ಇದೀಗ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಜಗದೀಶ್ ಶೆಟ್ಟರ್ ಏಕೆ ಬಿಜೆಪಿಗೆ ಹೋದರು ಗೊತ್ತಿಲ್ಲ. ಆದರೆ ನಾನು ಮತ್ತೆ ಬಿಜೆಪಿಗೆ ಹೋಗುವುದಿಲ್ಲ, ಹೋಗುವ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ಅವರ ವೈಯಕ್ತಿಕ. ಈ ಬಗ್ಗೆ ನಾನು ಮಾತನಾಡಲ್ಲ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಿಂದ ಕಾಂಗ್ರೆಸ್ ಗೆ ಯಾವುದೇ ಡ್ಯಾಮೇಜ್ ಆಗಲ್ಲ. ಅವರು ಯಾವ ಕಾರಣಕ್ಕೆ ಬಿಜೆಗೆ ಸೇರ್ಪಡೆಯಾದರು ಎಂಬುದು ಗೊತ್ತಿಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular