BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಹಲವು ನಾಯಕರು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ. ಈ ನಡುವೆ ಆಪರೇಷನ್ ಹಸ್ತ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆ ಸಂಚಲನ ಸೃಷ್ಟಿಸಿದೆ.

ಬಿಜೆಪಿಯ ಸಾಕಷ್ಟು ಅತೃಪ್ತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಜನವರಿ 26ರ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸುತ್ತೇವೆ. ಎಷ್ಟು ನಾಯಕರು ಬರುತ್ತಾರೆ ಎಂಬುದನ್ನು ನೀವೆ ಎಣಿಸುವಿರಂತೆ ಎಂದು ಹೇಳಿದ್ದಾರೆ.

ಬಿಜೆಪಿಯ ಹಲವು ಮುಖಂಡರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅವರು ಪಕ್ಷಕ್ಕೆ ಬಂದ ಮೇಲೆ ಸ್ಥಾನಮಾನದ ಬಗ್ಗೆ ಚಿಂತನೆ ಮಾಡಬೇಕು. ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಹಾಗಾಗಿ ಸ್ವಚ್ಛೆಯಿಂದ ಬರುವವರನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸೀಟು ಗೆಲ್ಲಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ನಾವು ನೀಲನಕ್ಷೆ ರೆಡಿ ಮಾಡಿದ್ದೇವೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read