ಬೆಳಗಾವಿ: ಸ್ವಾಭಿಮಾನದ ಜೀವನ ನಡೆಸುವ ಮಹಿಳೆಯರಿಗೆ ಮೋಸ, ಅನ್ಯಾಯ ಮಾಡಬರದು. ಮಹಿಳೆಯರನ್ನು ಹಗುರವಾಗಿ ಪರಿಗಣಿಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇತ್ತೀಚೆಗೆ ಮೈಕ್ರೋ ಫೈನಾನ್ಸ್ ನವರು ಮಹಿಳೆಯರಿಗೆ ಮೋಸ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಕೆಲವು ಅಧಿಕಾರಿಗಳೂ ಮಹಿಳೆಯರನ್ನು ಹಗುರವಾಗಿ ಪರಿಗಣಿಸುವುದನ್ನು ಕಾಣುತ್ತಿದ್ದೇವೆ. ಇಂತವುಗಳನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಯಾರಿಂದಲೂ ಮೋಸಕ್ಕೊಳಗಾಗಬೇಡಿ. ಎಚ್ಚರಿಕೆಯಿಂದಿರಿ ಎಂದು ಮಹಿಳೆಯರಿಗೆ ಕರೆ ನೀಡಿದರು.
ತೊಟ್ಟಿಲು ತೂಗುವ ಕೈ ಜಗತ್ತನ್ನೇ ಆಳಬಹುದು ಎಂದು ಮಹಿಳೆಯರು ಸಾಧನೆ ಮಾಡಿ ತೋರಿಸಿದ್ದಾರೆ. ಮಹಿಳೆಯರ ಸಾಧನೆಯನ್ನು ಗುರುತಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.