HomeKarnatakaBREAKING NEWS : 'ಗೃಹಲಕ್ಷ್ಮೀ' ಯೋಜನೆಯ ಅರ್ಜಿ ಸಲ್ಲಿಕೆಯ ವೆಚ್ಚ ಸರ್ಕಾರವೇ ಭರಿಸಲಿದೆ : ಸಚಿವೆ...

BREAKING NEWS : ‘ಗೃಹಲಕ್ಷ್ಮೀ’ ಯೋಜನೆಯ ಅರ್ಜಿ ಸಲ್ಲಿಕೆಯ ವೆಚ್ಚ ಸರ್ಕಾರವೇ ಭರಿಸಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಅರ್ಜಿಗೆ 20 ರೂ. ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಲಾಸ್ಟ್ ಡೇಟ್ ಇಲ್ಲ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಅರ್ಜಿ ಸಲ್ಲಿಕೆ ವೇಳೆ ಯಾರಿಗೂ ಕೂಡ 1 ರೂಪಾಯಿ ಕೂಡಬೇಡಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

ಕೊರಟಗೆರೆ : ಅನ್ನಭಾಗ್ಯ ಯೋಜನೆಯಡಿ ಮೂರು ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮೊದಲು ಅಕ್ಕಿಯ ಬದಲಿಗೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದು, ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಹಣ ನೀಡುತ್ತೇವೆ ಎಂದರೆ ಅದನ್ನೂ ಟೀಕೆ ಮಾಡುತ್ತಾರೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಬಡವರ ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೆಲವರು ರಾಜಕೀಯ ಕಾರಣಕ್ಕಾಗಿಯೇ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.

5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular