HomeKarnatakaಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣ: ಹಿಟ್ & ರನ್ ಮಾಡಿ ಪರಾರಿಯಾದ ಕ್ಯಾಂಟರ್...

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣ: ಹಿಟ್ & ರನ್ ಮಾಡಿ ಪರಾರಿಯಾದ ಕ್ಯಾಂಟರ್ ಗಾಗಿ ತೀವ್ರಗೊಂಡ ಶೋಧ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಟ್ & ರನ್ ಮಾಡಿ ಪರಾರಿಯಾದ ಕ್ಯಾಂಟರ್ ಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.

ಹಿಟ್ & ರನ್ ಮಾಡಿ ಎಸ್ಕೇಪ್ ಆಗಿರುವ ಕ್ಯಾಂಟರ್ ಹರಿಯಾಣ ಅಥವಾ ಪಂಜಾಬ್ ಮೂಲದ ವಾಹನ ಎಂದು ತಿಳಿದುಬಂದಿದೆ. ಹಿರೇಬಾಗೇವಾಡಿ ಟೋಲ್ ನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಪೊಲೀಸರಿ ಈಗಗಲೇ 60 ಕ್ಯಾಂಅರ್ ವಾಹನಗಳ ಮಾಹಿತಿ ಸಂಗ್ರಹಿಸಿದ್ದಾರೆ. 30 ವಾಹನಗಳನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.

ಜ.14ರಂದು ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಗಊ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು, ಕಾರು ಮರಕ್ಕೆ ಗುದ್ದಿದ್ದು, ಅಪಘಾತದಲ್ಲಿ ಸಚಿವರು ಗಂಭೀರವಾಗಿ ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular