HomeKarnatakaಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು

ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರನಿಗೆ ನೆರವಾಗುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.

ಚಾಮರಾಜನಗರ ಸಂತೆಮರಹಳ್ಳಿ ಮುಖ್ಯರಸ್ತೆಯ ಅಂಬೇಡ್ಕರ್ ಸರ್ಕಲ್ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಟಿ. ನರಸೀಪುರ ತಾಲೂಕಿನ ಗರ್ಗೇಶ್ವರಿ ಗ್ರಾಮದ ಯುವಕ ಸುಹೇಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಅಬ್ದುಲ್ ರಶೀದ್ ತಲೆಗೆ ತೀವ್ರ ಪೆಟ್ಟಾಗಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಸಭೆ ಮುಗಿಸಿಕೊಂಡು ಮಂಡ್ಯಕ್ಕೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತವಾಗಿರುವುದನ್ನು ಕಂಡು ಕೂಡಲೇ ಕಾರು ನಿಲ್ಲಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular