HomeKarnatakaBIG NEWS: ರಾಜ್ಯದ ಎಲ್ಲಾ ಅಂಗನವಾಡಿಗಳ ಉನ್ನತೀಕರಣ: ಅಂಗನವಾಡಿಯಲ್ಲೇ LKG, UKG ಆರಂಭ

BIG NEWS: ರಾಜ್ಯದ ಎಲ್ಲಾ ಅಂಗನವಾಡಿಗಳ ಉನ್ನತೀಕರಣ: ಅಂಗನವಾಡಿಯಲ್ಲೇ LKG, UKG ಆರಂಭ

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ(ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular