BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಹಿಟ್ & ರನ್ ಮಾಡಿ ಪರಾರಿಯಾಗಿದ್ದ ಟ್ರಕ್ ಚಾಲಕ ಕೊನೆಗೂ ಅರೆಸ್ಟ್

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂದಿಸಿದಂತೆ ನಾಪತ್ತೆಯಾಗಿದ್ದ ಟ್ರಕ್ ಚಾಲಕನನ್ನು ಬಂಧಿಸುವಲ್ಲಿ ಕೊನೆಗೂ ಬೆಳಗಾವಿಯ ಕಿತ್ತೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಿಟ್ & ರನ್ ಪ್ರಕರಣದಲ್ಲಿ ಸಚಿವರ ಕಾರು ಅಪಘಾತ ಮಾಡಿ ಟ್ರಕ್ ಸಮೇತ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಕರ ಕೊಂಡಿರಾಮ ಸೋಮವಂಶಿ (65) ಬಂಧಿತ ಆರೋಪಿ. ಆತನ ಬಳಿ ಇದ್ದ ಟ್ರಕ್ ನ್ನು ವಶಕ್ಕೆ ಪಡೆಯಲಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಾನಂದ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವೆ ಲ್ಖ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಓರ್ವ ಅಂಗರಕ್ಷಕನನ್ನು ಸರ್ಕಾರಿ ವಾಹನದಲ್ಲಿ ಬೆಂಗರಿನಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ವೇಳೆ ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್ ಬಳಿ ಟ್ರಕ್ ಚಾಲಕನೊಬ್ಬ ಕಾರಿಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸಹೋದ ಸಣ್ಣಪುಟ್ಟ ಗಾಯಗೊಂಡಿದ್ದರು. ಅಪಘಾತದ ಬಳಿಕ ಟ್ರಕ್ ಚಾಲಕ ಟ್ರಕ್ ಸಮೇತ ಎಸ್ಕೇಪ್ ಆಗಿದ್ದ. ಇದೀಗ ಕಿತ್ತೂರು ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read