ಪತ್ನಿಗೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪತಿ ರವೀಂದ್ರ ಹೆಬ್ಬಾಳ್ಕರ್

ಬೆಳಗಾವಿ: ಸಾಮಾನ್ಯವಾಗಿ ಸಾರ್ವಜನಿಕವಾಗಿ ಎಲ್ಲಿಯೂ ಕಣಿಸಿಕೊಳ್ಳದ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಪತಿ ರವೀಂದ್ರ ಹೆಬ್ಬಾಳ್ಕರ್ ಇಂದು ಪತ್ನಿಗೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಕಿತ್ತೂರು ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಗಂಭಿರವಾಗಿ ಗಾಯಗೊಂಡಿದ್ದು, ಸಹೋದರ ಚನ್ನರಾಜ ಹಟ್ಟಿಹೊಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇಬ್ಬರೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪತ್ನಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಪತಿ ರವೀಂದ್ರ ಹೆಬ್ಬಾಳ್ಕರ್ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಆಸ್ಪತ್ರೆಗೆ ಆಗಮಿಸಿ ಪತ್ನಿಯ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ಇದೇ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ ಹಾಗೂ ಇತರ ಕುಟುಂಬ ಸದಸ್ಯರು ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read