HomeKarnatakaಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನನ್ನು ಕೇವಲ ಬೆಳಗಾವಿಗೆ ಮಾತ್ರ ಸೀಮಿತ ಮಾಡಬೇಡಿ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ವರ್ಚಸ್ಸು ತೋರಿಸುವ ಅಗತ್ಯವಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದರೂ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ. ಮೈಸೂರಿನಲ್ಲಿ ಕಾರ್ಯಕ್ರಮ ಮಾಡಿದರೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular