HomeKarnatakaಕಾಂಗ್ರೆಸ್, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್: 2 ದಿನದಲ್ಲಿ ದೊಡ್ಡ ಮಟ್ಟದ ಐಟಿ ದಾಳಿ ಸುಳಿವು...

ಕಾಂಗ್ರೆಸ್, ಜೆಡಿಎಸ್ ಮುಖಂಡರಿಗೆ ಬಿಗ್ ಶಾಕ್: 2 ದಿನದಲ್ಲಿ ದೊಡ್ಡ ಮಟ್ಟದ ಐಟಿ ದಾಳಿ ಸುಳಿವು ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ. ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 50 ಜನರ ಮನೆಗಳ ಮೇಲೆ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ. 50 ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷದವರೂ ಇದ್ದಾರೆ. 15 ದಿನದ ಹಿಂದೆಯೇ ಐಟಿ ಅಧಿಕಾರಿಗಳು ರಾಜ್ಯಕ್ಕೆ ಬಂದ ಮಾಹಿತಿ ಇದೆ. ಸುಮಾರು ಒಂದು ಸಾವಿರ ಐಟಿ ಅಧಿಕಾರಿಗಳು ರಾಜ್ಯಕ್ಕೆ ಬಂದಿರುವ ಮಾಹಿತಿ ಇದೆ. ಎರಡು ಮೂರು ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಲೋಕಾಯುಕ್ತ, ಐಟಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular