
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗೌರಿಗದ್ದೆ ಆಶ್ರಮದಲ್ಲಿ ಮಳೆಗಾಗಿ ವಿನಯ್ ಗುರೂಜಿ ಅವರು ಚಂಡಿಕಾಯಾಗ ಹಮ್ಮಿಕೊಂಡಿದ್ದು, ಚಂಡಿಕಾ ಯಾಗದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದಾರೆ.
ವಿನಯ್ ಗುರೂಜಿ ಮಳೆಗಾಗಿ ಚಂಡಿಕಾಯಾಗ ಸಂಕಲ್ಪ ಮಾಡಿದ್ದು, ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಡಿ.ಸುಧಾಕರ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ.

