HomeKarnatakaಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರಭಾಕರ ಕೋರೆ ಆಕ್ಷೇಪ: ಬಹಿರಂಗ ಕ್ಷಮೆಗೆ ಆಗ್ರಹ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರಭಾಕರ ಕೋರೆ ಆಕ್ಷೇಪ: ಬಹಿರಂಗ ಕ್ಷಮೆಗೆ ಆಗ್ರಹ

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯನ್ನು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತೀವ್ರವಾಗಿ ಖಂಡಿಸಿದ್ದಾರೆ.

ಗುರುವಾರ ಕೆಎಲ್ಇ ವಿಶ್ವವಿದ್ಯಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಅವರ ಪರ ಪ್ರಚಾರ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಸರ್ಕಾರ ಕೇವಲ ಒಂದು ರೂಪಾಯಿಗೆ ಜಮೀನು ನೀಡಿದ್ದರಿಂದ ಕೆಎಲ್ಇ ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಬೆಳೆದಿದೆ ಎಂದು ಹೇಳಿದ್ದು, ಅವರ ಹೇಳಿಕೆಯನ್ನು ಪ್ರಭಾಕರ ಕೋರೆ ಖಂಡಿಸಿದ್ದಾರೆ.

ಸಚಿವರು ಕೆಲ್ಇ ಸಂಸ್ಥೆಯ ಇತಿಹಾಸ ಅರಿಯದೇ ಬಾಲಿಶ ಹೇಳಿಕೆ ನೀಡುವುದು ತರವಲ್ಲ. ಅವರು ಬಹಿರಂಗ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

108 ವರ್ಷಗಳ ಇತಿಹಾಸ ಹೊಂದಿರುವ ಕೆಎಲ್ಇ ಸಂಸ್ಥೆ ದಾನಿಗಳು, ಮಹಾದಾನಿಗಳಿಂದ, ಶಿರಸಂಗಿ ಲಿಂಗರಾಜರು, ರಾಜ ಲಖಮಗೌಡರು, ಭೂಮರಡ್ಡಿ ಬಸಪ್ಪನವರಂತಹ ತ್ಯಾಗವೀರರಿಂದ ಇಷ್ಟು ವಿಸ್ತಾರವಾಗಿ ಬೆಳೆದಿದೆ, ಕಾಂಗ್ರೆಸ್ಮ ಬಿಜೆಪಿ ಪಕ್ಷಗಳ ಪ್ರಶ್ನೆ ಇಲ್ಲಿ ಉದ್ಭವಿಸುವುದಿಲ್ಲ, ಸಂಸ್ಥೆ ಸ್ವಂತ ಹಣದಲ್ಲಿ ಆಸ್ತಿಗಳನ್ನು ಖರೀದಿಸಿದೆ, ಆಯಾ ಕಾಲಘಟ್ಟಗಳಲ್ಲಿದ್ದ ಪಕ್ಷಗಳಿಂದ ಸಹಾಯ ಸಹಕಾರ ಪಡೆದುಕೊಂಡಿದೆ. ಕೇವಲ ಕಾಂಗ್ರೆಸ್ ನಿಂದ ಕೆಎಲ್ಇ ಆಸ್ಪತ್ರೆ ನಿರ್ಮಿಸಿದೆ. ವಿವಿಗಳನ್ನು ಸ್ಥಾಪಿಸಿದೆ ಎನ್ನುವಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ಪ್ರಭಾಕರ ಕೋರೆ ತಿಳಿಸಿದ್ದಾರೆ.

ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೇರಿದವರು, ಬೆಂಬಲಿಗರು ಇದ್ದಾರೆ. ಾಡಳಿತ ಮಂಡಳಿಯವರು ಯಾವುದೇ ರಾಜಕೀಯ ಪಕ್ಷಕ್ಕೆ ಅಂಟಿಕೊಂಡಿಲ್ಲ. ಶಿಕ್ಷಣ ಸಂಸ್ಥೆಯಲ್ಲಿ ನಾವು ರಾಜಕೀಯ ತರುವುದಿಲ್ಲ. ಅದರ ಬೆಳವಣಿಗೆಗಾಗಿ ಎಲ್ಲರ ಸಹಕಾರ ಪಡೆಯುತ್ತೇವೆ. ಈ ನೆಲದ ಶಿಕ್ಷಣ ಸಂಸ್ಥೆಗಳ ನೈಜ ಇತಿಹಾಸವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅರಿತುಕೊಂಡಂತೆ ಕಾಣುವುದಿಲ್ಲ. ಮತ ಬೇಟೆಗಾಗಿ ಸುಳ್ಳು ಹೇಳಿಕೆ ನೀಡಿ ಜನರ ಭಾವನೆಗಳೊಂದಿಗೆ ಆಟವಾಡುವುದು ಕಾಂಗ್ರೆಸ್ ಗೆ ತರವಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಹೇಳಿಕೆ ಹಿಂಪಡೆದು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular