ಬೆಳಗಾವಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದ ಪಿಎಸ್ಐ ಅನ್ನಪೂರ್ಣ ಅವರ ಧೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಹಿಳಾಅ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಪಿಎಸ್ ಐ ಅನ್ನಪೂರ್ಣ ಕಾರ್ಯ ಶ್ಲಾಘಿಸಿದ್ದಾರೆ. ಅಲ್ಲದೇ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಕೊಂದ ಪಿಎಸ್ಐ ಅನ್ನಪೂರ‍್ನ ಅವರಿಗೆ ಅತ್ತುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಶಿಫಾರಸು ಮಾಡುತ್ತೇನೆ ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ನಾನು ಹಿಂದಿನಿಂದ ಪ್ರತಿಪಾದಿಸುತ್ತಿದ್ದೇನೆ. ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತ ನ್ಯಾಯ ಸಿಗಬೇಕು ಎಂದರು.
ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣ ಸಂಬಂಧ ಅನ್ನಪೂರ್ಣ ಅವರ ಕ್ರಮಕ್ಕೆ ಅಭಿನಂದಿಸುತ್ತೇನೆ. ಅವರ ನಡೆ ಬೇರೆ ಅಧಿಕಾರಿಗಳಿಗೆ ದಾರಿದೀಪವಾಗಲಿ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪಿಡುಗು ಸಮಾಜದಿಂದ ನಿವಾರಣೆಯಾಗಬೇಕು ಎಂದರು.
ನಮ್ಮ ಇಲಾಖೆಯಿಂದ ಸರ್ಕಾರಿ ನೌಕರರಿಗೆ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲ್ಲ. ಒಂದು ವೇಳೆ ಸರ್ಕಾರಿ ನೌಕರರಿಗೂ ನೀಡಿದರೆ ಅನ್ನಪೂರ್ಣ ಮೊದಲಿಗರಾಗುತ್ತಾರೆ ಎಂದು ಹೇಳಿದರು.