HomeKarnatakaಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆ: ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ: ಸಚಿವೆ ಲಕ್ಷ್ಮೀ...

ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆ: ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲಾಗದು ಎಂದರು.

ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರು ‘ನಾ ನಾಯಕಿ’ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ ಅಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನವೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆಯಾಗಿದ್ದು, ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಚುನಾವಣೆಗೂ ಮುನ್ನವೇ ಪ್ರಿಯಾಂಕಾ ಗಾಂಧಿ ಈ ಯೋಜನೆ ಘೋಷಿಸಿದ್ದರು. ಯಾವ ಗ್ಯಾರಂಟಿ ಯೋಜನೆಯೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular