BIG NEWS: ಪುನರ್ವಸತಿ ಕಾರ್ಯಕರ್ತರಿಗೆ ಗುಡ್ ನ್ಯೂಸ್: ಗೌರವರ ಧನ ಹೆಚ್ಚಳ

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read