HomeKarnatakaಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಪ್ರತಿಭಟನೆ ಕೈಬಿಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮನವಿ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಪ್ರತಿಭಟನೆ ಕೈಬಿಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮನವಿ

ಬೆಂಗಳೂರು: ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ನಾನು ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಿಎಲ್‌ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಮಾಡಿದ್ದೆ. ಆದರೆ, ಬಿಎಲ್‌ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದರು.

ನಾನೊಬ್ಬ ಮಹಿಳೆಯಾಗಿ ಅಂಗನವಾಡಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular