HomeKarnatakaಗೃಹಲಕ್ಷ್ಮೀ ಕಾರ್ಯಕ್ರಮದ ಬ್ಯುಸಿ ನಡುವೆ ಸಹೋದರನಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಕಾರ್ಯಕ್ರಮದ ಬ್ಯುಸಿ ನಡುವೆ ಸಹೋದರನಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ ನೀಡುವ ಬ್ಯುಸಿ ನಡುವೆಯೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಭ್ರಮದಿಂದ ರಕ್ಷಾಬಂಧನ ಆಚರಣೆ ಮಾಡಿದ್ದಾರೆ.

ಪ್ರತಿಬಾರಿ ಬೆಳಗಾವಿಯಲ್ಲಿ ರಕ್ಷಬಂಧನ ಆಚರಿಸುತ್ತಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಈಬಾರಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವುದರಿಂದ ಮೈಸೂರಿನಲ್ಲಿಯೇ ಹಬ್ಬವನ್ನು ಆಚರಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ವೇದಿಕೆಯ ಹಿಂಭಾಗದ ವಿಶ್ರಾಂತಿ ಕೊಠಡಿಯಲ್ಲಿ ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೂ ಸಚಿವೆ ರಾಖಿ ಕಟ್ಟುವ ಮೂಲಕ ರಕ್ಷಬಂಧನ ಆಚರಿಸಿದ್ದು ವಿಶೇಷ.

For Latest News Updates, Join Our Whatsapp Community🚩
RELATED ARTICLES

Most Popular