HomeLatest NewsBIG NEWS: ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು: ಸಚಿವೆ ಲಕ್ಷ್ಮೀ...

BIG NEWS: ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ

ಬೆಳಗಾವಿ: ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಮೃತಪಟ್ಟ ಕುಟುಂಬದವರಿಗೆ ಕೆಎಸ್ ಸಿಎ ಹಾಗೂ ಆರ್ ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಸಾವು ನೋವು ತಂದಿದೆ. ಆರ್ ಸಿಬಿ ಹಾಗೂ ಕೆಎಸ್ ಸಿಎ‌ ಹೆಚ್ಚಿನ ಪರಿಹಾರ ಕೊಡಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣದಲ್ಲಿ ವಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ. ನಮ್ಮ ಹಿರಿಯರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ. ರಾಜಕಾರಣಕ್ಕಿಂತ ಘಟನೆ ಯಾಕೆ ಆಯಿತು ಎಂಬುದು ಗೊತ್ತಾಗಬೇಕು. ಇಂಥ ದುರ್ಘಟನೆ ನಡೆದಿದ್ದು ನಿಜಕ್ಕೂ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular