HomeKarnatakaBIG NEWS: ಅಪಘಾತಕ್ಕೀಡಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ವಿದ್ಯಾರ್ಥಿ; ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವೆ

BIG NEWS: ಅಪಘಾತಕ್ಕೀಡಾಗಿ ರಸ್ತೆಯಲ್ಲಿ ನರಳಾಡುತ್ತಿದ್ದ ವಿದ್ಯಾರ್ಥಿ; ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವೆ

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮಾನವೀಯತೆ ಮೆರೆದಿದ್ದಾರೆ.

ಉಡುಪಿಯತ್ತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ವಿದ್ಯಾರ್ಥಿ ರಸ್ತೆಯಲ್ಲೆ ನರಳುತ್ತಿದ್ದ‌. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವರು, ವಿದ್ಯಾರ್ಥಿಯ ಕಂಡು ತಕ್ಷಣವೇ ಕಾರನ್ನು ನಿಲ್ಲಿಸಿ, ಆತನಿಗೆ ಉಪಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಆಟೋವೊಂದರಲ್ಲಿ ಗಾಯಾಳು ವಿದ್ಯಾರ್ಥಿಯನ್ನು ಕೂರಿಸಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular