HomeKarnatakaವಿಶೇಷ ಚೇತನ ಮಕ್ಕಳ ಶಾಲಾ ಶಿಕ್ಷಕರ ವೇತನ ಶೇ.40 ರಷ್ಟು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವೆ...

ವಿಶೇಷ ಚೇತನ ಮಕ್ಕಳ ಶಾಲಾ ಶಿಕ್ಷಕರ ವೇತನ ಶೇ.40 ರಷ್ಟು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮುಂಬರುವ ಬಜೆಟ್‌ನಲ್ಲಿ ವಿಶೇಷ ಚೇತನರಿಗೆ ವಿಶೇಷ ಯೋಜನೆಗಳನ್ನು ನೀಡುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ 2025-26 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ವಿಕಲಚೇತನರು ಸ್ವಾವಲಂಬಿ ಹಾಗೂ ಸ್ವಚ್ಛವಾದ ಜೀವನ ಸಾಗಿಸುವಂತಾಗಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 13 ಲಕ್ಷ ವಿಕಲಚೇತನರಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಎಲ್ಲ ವಿಶೇಷ ಚೇತನರಿಗೆ ವಿಶೇಷ ಯೋಜನೆಗೆ ಪ್ರಸ್ತಾವ‌ನೆ ಸಲ್ಲಿಸಲಾಗಿದೆ. ಅವು ಜಾರಿಯಾಗುವ ವಿಶ್ವಾಸವಿದೆ ಎಂದು ಸಚಿವರು ತಿಳಿಸಿದರು.

ಹಲವೆಡೆ ವಿಶೇಷ ಚೇತನ ಮಕ್ಕಳ ಶಾಲೆಗಳಿಗೆ ಭೇಟಿ ನೀಡಿದ್ದೇನೆ. ನಿಸ್ವಾರ್ಥ, ಪ್ರೀತಿಯಿಂದ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ತಾಯಿಗಿಂತ ಜಾಸ್ತಿ ಕಾಳಜಿ ತೆಗೆದುಕೊಳ್ಳುತ್ತಿದ್ದಾರೆ. ಅಂತವರಿಗೆ ಬಹಳ ಕಡಿಮೆ ಸಂಬಳವಿದೆ. ಅದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ವಿಶೇಷ ಚೇತನ ಮಕ್ಕಳ ಶಾಲೆಯ ಶಿಕ್ಷಕರ ವೇತನವನ್ನು ಶೇಕಡ 40 ರಷ್ಟು ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೇವೆಗೆ ಗೌರವ ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.

ವಿಕಲಚೇತನರು ಸಾಕಷ್ಟು ಸಾಧನೆ ಮಾಡಿದ್ದಾರೆ, ಪ್ರಶಸ್ತಿಯನ್ನು ತೆಗೆದುಕೊಂಡಿದ್ದಾರೆ. ವಿಶೇಷ ಚೇತನರು ದೇವರು ಕೊಟ್ಟ ಜೀವನ ಕಷ್ಟ ಎನ್ನದೆ ಜೀವಿಸುತ್ತಿದ್ದಾರೆ. ಅವರಿಗೆ ಈಗಿರುವ ಯೋಜನೆಗಳು ಸಾಲುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಸೌಲಭ್ಯ ಸಿಗಬೇಕು, ಶೇ.5ರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯವಾಗಿ ಜಾರಿ ಆಗಲೇಬೇಕು. ಪ್ರತಿ ಯೋಜನೆಯಲ್ಲಿ 5% ಮೀಸಲಾತಿ ಇದ್ದರೂ ಯಾರೂ ಇದರ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular