HomeLatest Newsಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಬಜೆಟ್ ನಿಲ್ಲಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಬಜೆಟ್ ನಿಲ್ಲಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿರ್ಲಕ್ಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಕೊಪ್ಪಳ : ಕೇಂದ್ರ ಬಜೆಟ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ಪದೆ ಪದೇ ಅನ್ಯಾಯವಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯಂಥ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ ಎಂದು ಗುಡುಗಿದರು.

ಇದೇ ವೇಳೆ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಶಾಸಕ ಮಹೇಶ್‌ ಟೆಂಗಿನಕಾಯಿ ವಿರುದ್ಧ ಗರಂ ಆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹೇಶ್ ಟೆಂಗಿನಕಾಯಿ ಒಂಥರ ಬಲೂನ್‌ ಇದ್ದಂಗೆ, ಯಾವಾಗ ಗಾಳಿ ಹೋಗುತ್ತದೆ ಗೊತ್ತಿಲ್ಲ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲದೇ ಈ ರೀತಿ ಅನಾವಶ್ಯಕವಾಗಿ ಆರೋಪ ಮಾತನಾಡುತ್ತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಭ್ರಮನಿರಸಗೊಂಡಿದ್ದರು. ಕೊಟ್ಟ ಮಾತಿನಂತೆ ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಇದುವರೆಗೂ 26 ತಿಂಗಳ ಕಂತು ಬಿಡುಗಡೆಯಾಗಿದ್ದು, ಮನೆ ಮನೆಗೆ ನಮ್ಮ ಯೋಜನೆಗಳು ತಲುಪುತ್ತಿವೆ ಎಂದರು.

ಕಳೆದ ವರ್ಷದ ಫೆಬ್ರವರಿ, ಮಾರ್ಚ್‌ ತಿಂಗಳ ಹಣ ಬಿಡುಗಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಹಣಕಾಸು ಇಲಾಖೆಯವರು ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular