ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಎಂ.ಎನ್.ಲಕ್ಷ್ಮಿದೇವಿ ವಿಧಿವಶರಾಗಿದ್ದಾರೆ.
70 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಅಭಿನಯಿಸಿದ್ದ ಎಂ.ಎನ್.ಲಕ್ಷ್ಮಿ ದೇವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯದಿಂದಾಗಿ ಬೆಂಗಳೂರಿನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಹಾಸ್ಯ ನಟಿಯಾಗಿ, ಪೋಷಕ ನಟಿಯಾಗಿ ಅಭಿಮಾನಿಗಳನ್ನು ರಂಜಿಸಿದ್ದರು. ಮಂಡ್ಯ ಮೂಲದ ಎಂ.ಎನ್.ಲಕ್ಷ್ಮಿದೇವಿ, ಶ್ರೀನಿವಾಸ ಕಲ್ಯಾಣ ಸಿನಿಮಾದಿಂದ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ್ದರು. ಭಕ್ತ ಕನಕದಾಸ, ಬಂಗಾರದ ಮನುಷ್ಯ, ಶ್ರೀಕೃಷ್ಣದೇವರಾಯ ಸೇರಿದಂತೆ 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಸಿನಿಮಾ ಮಾತ್ರವಲ್ಲ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಇತ್ತೀಚೆಗೆ ಲಕ್ಷ್ಮೀ ನಿವಾಸ ಧರಾವಾಹಿಯಲ್ಲಿ ಅಭಿನಯಿಸಿದ್ದರು. ಅವರ ಅಭಿನಯ ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾಗಿತ್ತು.

