HomeKarnatakaBIG NEWS: ನಾಳೆಯಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಗಾಜಿನ...

BIG NEWS: ನಾಳೆಯಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಗಾಜಿನ ಮನೆ

ಬೆಂಗಳೂರು: ನಾಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ, ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಪ್ರಾರಂಭವಾಗಲಿದೆ.

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಲಾಲ್ ಬಾಗ್ ನ ಗಾಜಿನ ಮನೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ನೋಡುಗರನ್ನು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

ಈ ಬಾರಿ ಫಲಪುಷ್ಪ ಪ್ರದೇಶನಕ್ಕಾಗಿ 25 ಲಕ್ಷ ವಿವಿಧ ಬಗೆಯ ಹೂವುಗಳನ್ನು ಬಳಸಲಾಗಿದ್ದು, ಸಸ್ಯೋದ್ಯಾನ ಕಣ್ಮನಸೆಳೆಯುತ್ತಿದೆ. ಜನವರಿ 15ರಿಂದ ಆರಂಭವಾಗಲಿರುವ ಫಲಪುಷ್ಪ ಪ್ರದರ್ಶನ ಜನವರಿ 27ರವರೆಗೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular