HomeKarnatakaLalbagh Flower Show : ‘ಫ್ಲವರ್ ಶೋ’ ವೀಕ್ಷಣೆಗೆ ಹರಿದು ಬಂದ ಜನಸಾಗರ : ಮೊದಲ...

Lalbagh Flower Show : ‘ಫ್ಲವರ್ ಶೋ’ ವೀಕ್ಷಣೆಗೆ ಹರಿದು ಬಂದ ಜನಸಾಗರ : ಮೊದಲ ದಿನವೇ 28 ಸಾವಿರ ಮಂದಿ ಭೇಟಿ, 20 ಲಕ್ಷ ಕಲೆಕ್ಷನ್

ಬೆಂಗಳೂರು :  ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫ್ಲವರ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಮೊದಲ ದಿನವೇ 28 ಸಾವಿರ ಮಂದಿ ಭೇಟಿ ನೀಡಿದ್ದಾರೆ.

ವಿವಿಧ ರೀತಿಯ ಹೂವುಗಳನ್ನು ವೀಕ್ಷಣೆ ಮಾಡಿ ಸಾರ್ವಜನಿಕರು ಸಂತೋಷಪಟ್ಟರು. ಶಕ್ತಿ ಯೋಜನೆ ಹಿನ್ನೆಲೆ  ಮಹಿಳೆಯರ ಸಂಖ್ಯೆಯೇ ಹೆಚ್ಚಿದ್ದು, ವಿವಿಧ ಊರುಗಳಿಂದ ಫ್ಲವರ್ ಶೋ ವೀಕ್ಷಿಸಲು ಮಹಿಳೆಯರು ತಂಡೋಪತಂಡವಾಗಿ ಆಗಮಿಸಿದರು.

ಶನಿವಾರ 28 ಸಾವಿರ ಜನ ಆಗಮಿಸಿದ್ದು, 18.50 ಲಕ್ಷ ರೂ. ಸಂಗ್ರಹವಾಗಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ. ಎಂ.ಜಗದೀಶ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

76 ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214 ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದ್ದು, ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬಂದಿದೆ. ಇನ್ನು 8 ಲಕ್ಷದಷ್ಟು ಹೂಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ನಂದಿಗಿರಿಧಾಮ, ಕೆಮ್ಮಣ್ಣುಗುಂಡಿ ಗಿರಿಧಾಮ, ತಮಿಳುನಾಡು, ಆಂಧ್ರಪ್ರದೇಶ, ಊಟಿಯಿಂದ ತರಿಸಲಾಗಿದೆ.

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular