ಬೆಂಗಳೂರು : ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 7 ರಿಂದ 18ರ ವರೆಗೆ ನಡೆಯಲಿದೆ.
ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ.
ಪ್ರವೇಶ ಶುಲ್ಕ ಹೀಗಿದೆ..
₹80 ವಯಸ್ಕರಿಗೆ
₹100 ರಜಾ ದಿನಗಳಲ್ಲಿ
₹30 ಮಕ್ಕಳಿಗೆ
ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತ
ಪ್ರದರ್ಶನದ ಸಮಯ :
ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ
ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 7 ರಿಂದ 18ರ ವರೆಗೆ ನಡೆಯಲಿದೆ.
— DIPR Karnataka (@KarnatakaVarthe) August 6, 2025
ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ… pic.twitter.com/2pHCObdZ2y