Bengaluru : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ : ಸಂಜೆ 6 ಗಂಟೆಗೆ ಸಿಎಂ ಚಾಲನೆ

ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್’ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ತೋಟಗಾರಿಕೆ ಇಲಾಖೆ, ನಗರದ ವಿವಿಧ ಲಾಭರಹಿತ ಸಂಸ್ಥೆಗಳ ಸಹಯೋಗದೊಂದಿಗೆ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಶೇಷ ಅಂದರೆ ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ನೋಡುಗರ ಮನ ಸೂರೆಗೊಳಿಸಲಿದೆ.

76 ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214 ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದ್ದು, ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಫ್ಲವರ್ ಶೋ ಬರುವವರಿಗೆ ಎಂಟ್ರಿ ಫೀಜ್ ದೊಡ್ಡವರಿಗೆ 70 ರೂ ಹಾಗೂ ಮಕ್ಕಳಿಗೆ 30 ರುಪಾಯಿ ನಿಗದಿ ಮಾಡಲಾಗಿದೆ. ಈ ಬಾರಿ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆಯಿದ್ದು. ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಶಾಲಾ ಮಕ್ಕಳಿಗೆ ಪ್ರವೇಶ ಉಚಿತವಾಗಿರಲಿದೆ, 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ.

ಜನರಿಗೆ ಆರೋಗ್ಯ ಸಮಸ್ಯೆಯಾಗದಂತೆ ಹೆಲ್ತ್ ಕೇರ್ ಸೆಂಟರ್, ಎರಡು ಆಂಬುಲೆನ್ಸ್, ಮಹಿಳೆಯರ ಶಿಬಿರ ವ್ಯವಸ್ಥೆ ಮಾಡಲಾಗಿದೆ. ಲಾಲ್ ಬಾಗ್ ನಲ್ಲಿರುವ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಯಿಗಳಿಗೆ ವ್ಯಾಕ್ಸಿನ್ ಮಾಡಿಸಲಾಗಿದೆ.ಫ್ಲವರ್ ಶೋನಲ್ಲಿ ಈ ಬಾರಿ ಪ್ರಮುಖವಾಗಿ ಸ್ವದೇಶಿ ಹೂಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 7 ಲಕ್ಷ ಹೂಗಳನ್ನು ಲಾಲ್ ಬಾಗ್ ನರ್ಸರಿಯಲ್ಲಿ ಬೆಳೆಸಲಾಗಿದೆ. ಇನ್ನು 8 ಲಕ್ಷದಷ್ಟು ಹೂಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ನಂದಿಗಿರಿಧಾಮ, ಕೆಮ್ಮಣ್ಣುಗುಂಡಿ ಗಿರಿಧಾಮ, ತಮಿಳುನಾಡು, ಆಂಧ್ರಪ್ರದೇಶ, ಊಟಿಯಿಂದ ತರಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read