HomeKarnatakaಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಭೂ ಕಾಯ್ದೆಗೆ ತಿದ್ದುಪಡಿ: ಸಿಎಂ

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಭೂ ಕಾಯ್ದೆಗೆ ತಿದ್ದುಪಡಿ: ಸಿಎಂ

 

ಬೆಂಗಳೂರು: ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ಬಿಜೆಪಿಯವರು ತಿದ್ದುಪಡಿ ತಂದು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಕೂಡಲೇ ಈ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ಹಿಂದಿನಂತೆ ಕೃಷಿಕರಷ್ಟೇ ಕೃಷಿ ಭೂಮಿ ಕರಿರಿಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular