HomeKarnatakaBIG NEWS: ಮಾಸ್ಟರ್ ಪ್ಲಾನ್ ಭೂಮಿಗೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಆದೇಶ ಶೀಘ್ರ: ಸಿಎಂ...

BIG NEWS: ಮಾಸ್ಟರ್ ಪ್ಲಾನ್ ಭೂಮಿಗೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಆದೇಶ ಶೀಘ್ರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ನೀಡಿದ ಸೂಚನೆಗಳು

ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಅನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ವರ್ಷ, 5 ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ. ನಮ್ಮ ಸರ್ಕಾರ ಬ೦ದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ.

ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ.

ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕ೦ದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ. ನಕ್ಷಾ ಯೋಜನೆ ಮೂಲಕ ನಗರ ಪ್ರದೇಶದಲ್ಲಿ ಡ್ರೋನ್ ಸರ್ವೆ ಮೂಲಕ ಪ್ರಾಪರ್ಟಿ ಕಾರ್ಡು ನೀಡಲಾಗುತ್ತಿದೆ. 21 ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೇ ಕಾರ್ಯವನ್ನು ಕೈಗೊಳ್ಳಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಡ್ರೋನ್ ಸರ್ವೆ ಆರಂಭಿಸಬೇಕು.

ಭೂ ಸುರಕ್ಷಾ ಯೋಜನೆ ಮೂಲಕ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದುವರೆಗೆ ಸುಮಾರು 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ ಪೂರ್ಣಗೊಳಿಸಲಾಗಿದೆ. ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ. ಎಲ್ಲಾ 31 ಜಿಲ್ಲೆಗಳಲ್ಲಿ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ.

ಹಲವು ವರ್ಷಗಳಿಂದ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಂದ ಸದರಿ ಜಮೀನು ಸ್ವಾಧೀನಪಡಿಸುವ ಸಂದರ್ಭದಲ್ಲಿ ಎಕ್ಸ್‌ ಗ್ರೇಷಿಯಾ ನೀಡುವ ಬಗ್ಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು.

ತಹಶೀಲ್ದಾರ್ – ಜಿಲ್ಲಾಧಿಕಾರಿ ಕೋರ್ಟ್ ಗಳಲ್ಲಿನ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ವಿಲೇವಾರಿ ವೇಗ ಕಡಿಮೆ ಇದೆ. ಇದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಈ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ನೀಡುತ್ತಿದ್ದೇನೆ.

ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಜಮೀನು ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular