HomeLatest NewsBREAKING : ಚಿತ್ರದುರ್ಗದಲ್ಲಿ ಜಮೀನು ವಿವಾದ : ಮಠಕ್ಕೆ ನುಗ್ಗಿ ಬಸವ ಹರಳಯ್ಯ ಸ್ವಾಮೀಜಿ ಮೇಲೆ...

BREAKING : ಚಿತ್ರದುರ್ಗದಲ್ಲಿ ಜಮೀನು ವಿವಾದ : ಮಠಕ್ಕೆ ನುಗ್ಗಿ ಬಸವ ಹರಳಯ್ಯ ಸ್ವಾಮೀಜಿ ಮೇಲೆ ರಕ್ತ ಬರುವಂತೆ ಹಲ್ಲೆ.!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಶಿವಶರಣ ಹರಳಯ್ಯ ಮಠದ ಪೀಠಾಧಿಪತಿ ಬಸವ ಹರಳಯ್ಯ ಸ್ವಾಮೀಜಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಮಠದ ಪ್ರವೇಶ ದ್ವಾರದ ಜಾಗದ ವಿಚಾರವಾಗಿ ನಡೆಯುತ್ತಿದ್ದ ವಿವಾದವೇ ಈ ಹಲ್ಲೆಗೆ ಕಾರಣ ಎನ್ನಲಾಗಿದೆ.

ಮಠದ ಪಕ್ಕದ ಜಮೀನಿನ ಮಾಲೀಕ ಸಿದ್ದೇಶ್ವರ ಹಾಗೂ ಆತನ ಸಹಚರರು ಭಾನುವಾರ ರಾತ್ರಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮತ್ತು ಮಠದ ಶಾಲಾ ಬಸ್ ಚಾಲಕ ಭೀಮರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಒಂದು ವರ್ಷದಿಂದ ಮಠದ ಪ್ರವೇಶ ದ್ವಾರದ ಜಾಗಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಪ್ರಕರಣ ಇತ್ಯರ್ಥವಾಗುವ ಮುನ್ನವೇ ಈ ಹಲ್ಲೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹಲ್ಲೆಯ ಬಳಿಕ ದೂರು ನೀಡಲು ಐಮಂಗಲ ಪೊಲೀಸ್ ಠಾಣೆಗೆ ತೆರಳಿದ ಸ್ವಾಮೀಜಿಯನ್ನು ಆರೋಪಿಗಳು ಅಲ್ಲಿಯವರೆಗೂ ಬೆನ್ನಟ್ಟಿ ಬಂದಿದ್ದಾರೆ. ಠಾಣೆಯೊಳಗೂ ದಾಂಧಲೆ ನಡೆಸಿ, ಸ್ವಾಮೀಜಿ ಕುಳಿತಿದ್ದ ಕುರ್ಚಿಯನ್ನು ಒಡೆದು ಬೆದರಿಕೆ ಹಾಕಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಸ್ಥಳೀಯರು ಪೊಲೀಸ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular