ಬೆಂಗಳೂರು : ಭೂದಾನ ವಿದ್ಯಾದಾನದಡಿ ಯೋಜನೆಯಡಿ ಸರ್ಕಾರಿ ಶಾಲೆಗೆ ಭೂಮಿ ದಾನ ನೀಡಿರುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಲವು ದಶಕಗಳ ಹಿಂದೆ ಭೂದಾನ/ವಿದ್ಯಾದಾನದಡಿ ಶಾಲೆಗೆ ಭೂಮಿಯನ್ನು ದಾನವಾಗಿ ನೀಡಿದ್ದು, ಸದರಿ ಜಮೀನುಗಳನ್ನು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಂಡು ಸ್ವಾಧೀನದಲ್ಲಿರುವುದು, ಅಕ್ರಮವಾಗಿ ಶಾಲೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು, ಸದರಿ ಜಮೀನನ್ನು ಶಾಲಾ ಸುಪರ್ದಿಗೆ ಪಡೆದು ಒತ್ತುವರಿದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿರುತ್ತದೆ. ಆದ್ದರಿಂದ, ಶಾಲೆಗಳ ಜಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಸದರಿ ಜಾಗವನ್ನು ಶಾಲೆಯ ಹೆಸರಿಗೆ ಖಾತೆ ಮಾಡಿಸುವಂತೆ ಹಾಗೂ ಕಾನೂನುಬಾಹಿರವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿಯಮಾನುಸಾರ ಸಂಬಂಧಪಟ್ಟ ಪ್ರಾಧಿಕಾರದಿಂದ ಸರ್ವೆ ಮಾಡಿಸಿ ಒತ್ತುವರಿಯನ್ನು ತೆರವುಗೊಳಿಸಿ ಜಿಲ್ಲಾಧಿಕಾರಿಗಳಿಂದ ನಿಯಮಗಳಂತೆ ಜಾಗವನ್ನು ಶಾಲೆಗಳ ಹೆಸರಿಗೆ ಖಾತೆ ಮಾಡಿಸಲು ಅಗತ್ಯ ಕ್ರಮವಹಿಸುವಂತೆ ಕೋರಿದೆ.
