HomeLatest Newsರವಿಶಂಕರ್ ಗುರೂಜಿ ವಿರುದ್ಧದ ಭೂ ಒತ್ತುವರಿ ಪ್ರಕರಣ ರದ್ದು

ರವಿಶಂಕರ್ ಗುರೂಜಿ ವಿರುದ್ಧದ ಭೂ ಒತ್ತುವರಿ ಪ್ರಕರಣ ರದ್ದು

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲಿಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧಪಟ್ಟ ಶ್ರೀ ರವಿಶಂಕರ್ ಗುರೂಜಿ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಮೆಟ್ರೋ ಪಾಲಿಟನ್ ಟಾಸ್ ಫೋರ್ಸ್(ಬಿಎಂಟಿಎಫ್) ದಾಖಲಿಸಿದ ಎಫ್ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಪುರಸ್ಕರಿಸಿದೆ. ರವಿಶಂಕರ್ ಗುರೂಜಿ ವಿರುದ್ಧದ ಪ್ರಕರಣ ರದ್ದುಪಡಿಸಿದ ನ್ಯಾಯಪೀಠ ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶಿಸಿದೆ. ವಿಸ್ತೃತ ಆದೇಶ ಬಿಡುಗಡೆಯಾಗಬೇಕಿದೆ.

ಉತ್ತರಹಳ್ಳಿ ಹೋಬಳಿಯ ಕಗ್ಗಲಿಪುರ ಗ್ರಾಮದ ವಿವಿಧ ಸರ್ವೇ ನಂಬರ್ ಗಳಲ್ಲಿ ಸರ್ಕಾರಿ ಜಮೀನು, ಕೆರೆ, ರಾಜಾ ಕಾಲುವೆ ಒತ್ತುವರಿ ಮಾಡಿದ ಆರೋಪ ಅರ್ಜಿದಾರರ ಮೇಲಿದ್ದ ಹಿನ್ನೆಲೆಯಲ್ಲಿ ಬಿಎಂಟಿಎಫ್ ನಿಂದ ಎಫ್ಐಆರ್ ದಾಖಲಿಸಲಾಗಿತ್ತು. ಇದನ್ನು ರದ್ದುಪಡಿಸಲು ಕೋರಿದ ರವಿಶಂಕರ್ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿ ಅತಿಕ್ರಮಿಸಿರುವುದನ್ನು ಬಿಎಂಟಿಎಫ್ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರು ವಿರುದ್ಧ ಒತ್ತುವರಿ ಮಾಡಿದ ಆರೋಪವಿದೆ. ಈ ಯಾವುದೇ ಪ್ರದೇಶಗಳು ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ರವಿಶಂಕರ್ ಗುರೂಜಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪಗಳಿದ್ದು, ಈ ಹಂತದಲ್ಲಿ ತನಿಖೆಗೆ ತಡೆ ನೀಡಬಾರದು ಎಂದು ಮನವಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular