HomeAgriculture‘ಭೂ ಒಡೆತನ ಯೋಜನೆ'ಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು

‘ಭೂ ಒಡೆತನ ಯೋಜನೆ’ಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕಚೇರಿ ವತಿಯಿಂದ ‘ಭೂ ಒಡೆತನ ಯೋಜನೆ’ಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನಿನ ಸೌಲಭ್ಯ ಕಲ್ಪಿಸಲು ಇತರ ಜನಾಂಗದವರಿಂದ ಜಮೀನನ್ನು ಖರೀದಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಹೊರತುಪಡಿಸಿ, ಇತರ ಜನಾಂಗದವರಿಂದ ಮಾತ್ರ ಜಮೀನನ್ನು ಖರೀದಿಸಲಾಗುತ್ತದೆ. ಜಮೀನು ನೀಡಲು ಆಸಕ್ತಿ ಇರುವ ಮಾಲೀಕರು ನಿಗಮಕ್ಕೆ ಒಪ್ಪಿಗೆ ಪತ್ರವನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಭೂ ಮಾಲೀಕರು ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ ಮೆಂಟ್ ಪ್ರದೇಶದ ನಂದಿ ಕಾಲೋನಿಯ 1ನೇ ಕ್ರಾಸ್ ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-245551, ಮೊ.9886618721 ಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಬಳ್ಳಾರಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular