HomeAgricultureಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.

ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ. ಸೂರ್ಯನ ಕಿರಣಗಳ ಶಾಖಕ್ಕೆ ಒಳಗಾಗುವುದರಿಂದ ಮಣ್ಣು ಹೆಚ್ಚು ಫಲವತ್ತತೆಯನ್ನು ಹೊಂದುತ್ತದೆ. ಉಳುಮೆ ಮಾಡಿದ ಮಣ್ಣು ಸೂಕ್ಷ್ಮ ಜೀವಿಗಳಿಗೆ ಹಾಗೂ ರೈತನ ಮಿತ್ರ ಎರೆಹುಳುಗಳ ಬೆಳವಣಿಗೆಗೆ ಸಹಾಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಲ್ಲದೆ ಮಾಗಿ ಉಳುಮೆ ಮಾಡುವುದರಿಂದ ಕಳೆಗಳ ಹತೋಟಿ ಮಾಡಬಹುದು ಮತ್ತು ಮಣ್ಣಿನಲ್ಲಿ ಅವಿತಿರುವಂತಹ ಕೀಟ ಹಾಗೂ ಅವುಗಳ ತತ್ತಿಗಳು ಮತ್ತು ಕೋಶಗಳು ಸೂರ್ಯನ ಶಾಖಕ್ಕೆ ಒಡ್ಡಿಕೊಂಡು ಅವುಗಳ ಸಂತತಿ ಕಡಿಮೆ ಆಗುತ್ತದೆ ಮತ್ತು ಸಮರ್ಪಕವಾಗಿ ಹತೋಟಿ ಆಗುತ್ತದೆ.

ಮಾಗಿ ಉಳುಮೆ ಮಾಡುವ ಮೊದಲು ರೈತರು ತಮ್ಮ ಹೊಲಗಳಿಗೆ ಹೆಕ್ಟೆರಿಗೆ 10 ಟನ್‍ಗಳಷ್ಟು ಕೊಟ್ಟಿಗೆ ಅಥವಾ ಸಗಣಿ ಗೊಬ್ಬರವನ್ನು ಸಮನಾಗಿ ಹರಡಿ ನಂತರ ನೇಗಿಲಿನಿಂದ ಉಳುಮೆ ಮಾಡಿ ಗೊಬ್ಬರವನ್ನು ಮಣ್ಣಿನಲ್ಲಿ ಸೇರಿಸಬಹುದು ಎಂದು ಕೃಷಿ ಇಲಾಖೆಯ ಧಾರವಾಡ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular