ಹಾಸನ: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯ ಕಂಟೇನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ರೈತ ನಂಜುಂಡ(50) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ.
ಕೆಲಸ ಮಾಡುವ ಸಂದರ್ಭದಲ್ಲಿ ಹೆಜ್ಜೇನು ಹುಳಗಳು ಏಕಾಏಕಿ ದಾಳಿ ಮಾಡಿದ್ದರಿಂದ ಸ್ಥಳದಲ್ಲಿಯೇ ಕುಸಿದು ಬಿದ್ದು ನಂಜುಂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರಿಗೆ ಪತ್ನಿ ಮತ್ತು ಓರ್ವ ಪುತ್ರ ಇದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.