HomeKarnatakaಕೊಡಗಿನಲ್ಲಿ ಭೂಕುಸಿತ, ಪ್ರವಾಹ ಭೀತಿ ; ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

ಕೊಡಗಿನಲ್ಲಿ ಭೂಕುಸಿತ, ಪ್ರವಾಹ ಭೀತಿ ; ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಮಹತ್ವದ ಸೂಚನೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿದರ್ೇಶನ ನೀಡಿದ್ದಾರೆ.
ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿದರ್ೇಶನ ನೀಡಿದರು.
ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ. ನಿಂದ ಹಣ ಬಿಡುಗಡೆ ಮಾಡಲಾಗುವುದು. ಸಕರ್ಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ.ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿದರ್ೇಶನ ನೀಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸಕರ್ಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು.
ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿದರ್ೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular